ಮಂಗಳೂರು(ಬೆಳಗಾವಿ): ಕಿತ್ತೂರು–ಬೀಡಿ ರಸ್ತೆಯ ಫಾರೆಸ್ಟ್ ನಾಕಾ ಬಳಿ ಜ.31ರಂದು ಕಾಲೇಜು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಿತ್ತೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದ ಕಾವೇರಿ ಬಸಪ್ಪ ಕಾಜಗಾರ (20) ಮೃತ ವಿದ್ಯಾರ್ಥಿನಿ. ಎಂದಿನಂತೆ ಬುಧವಾರ ಕೂಡ ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿ ಮನೆ ಕಡೆಗೆ ಹೊರಟಿದ್ದರು. ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಏಕಾಏಕಿ ಬಂದ ಟಂಟಂ ವಾಹನ ವಿದ್ಯಾರ್ಥಿನಿ ಮೇಲೆಯೇ ಹರಿದಿದೆ. ತೀವ್ರ ಗಾಯಗೊಂಡ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿ– ವಿದ್ಯಾರ್ಥಿನಿಯರು ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಿ, ಮದ್ಯ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ವಿದ್ಯಾರ್ಥಿನಿಯ ಸಾವಿಗೆ ಕಾರಣರಾದ ಚಾಲಲಕನ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.