ಸರಕಾರದ ಕಾರ್ಯಕ್ರಮಗಳ ಆರಂಭದಲ್ಲೇ ನಾಡಗೀತೆ ಹಾಡುವುದು ಕಡ್ಡಾಯ-ರಾಜ್ಯ ಸರಕಾರ ಆದೇಶ

ಮಂಗಳೂರು: ರಾಜ್ಯ ಸರಕಾರದ ಸರಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರಕವಿ ಕುವೆಂಪು ರಚಿತ ಜಯಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರಕಾರ, ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅರೆ ಸರಕಾರಿ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಆರಂಭದಲ್ಲಿ ನಾಡಗೀತೆ ಹಾಡುವಂತೆ ಆದೇಶ ಹೊರಡಿಸಿದೆ.

ಜನವರಿ.7ರಂದು ಹೊರಡಿಸಿದ್ದ ಸರಕಾರಿ ಆದೇಶದಲ್ಲಿ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಎಲ್ಲಾ ಸಾಂಸ್ಕೃತಿಕ, ಸಾಹಿತ್ಯಕ, ಇತರೆ ಅಧಿಕೃತ ಕಾರ್ಯಕ್ರಮಗಳಲ್ಲಿ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಲಾಗಿತ್ತು. ಈ ಆದೇಶಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here