ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ಫೆ. 9 ಮತ್ತು 10ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ, ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದು, ದಾವಣಗೆರೆಯಲ್ಲಿ ಪಾರ್ವತಮ್ಮ ಮತ್ತು ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಅಮಿತ್ ಶಾ ಸನ್ಮಾನಿಸಲಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. ಮಾತ್ರವಲ್ಲದೆ, ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧಿಪತಿಗಳೊಂದಿಗೆ ಸಮಾಲೋಚನೆ ನಡೆಸಲಿರುವ ಅಮಿತ್ ಶಾ, ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.