ಮಂಗಳೂರು(ಭೂಪಾಲ್): ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ 11 ಜನ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿ ಫೆ.6ರಂದು ಸಂಭವಿಸಿದೆ.
ಅಗ್ನಿ ಅವಘಡದಲ್ಲಿ 11 ಜನ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದಾರೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್ ಗೆ ಸ್ಥಳಾಂತರಿಸಲಾಗಿದೆ. ಕಾರ್ಖಾನೆಯಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ಘಟನೆಯ ಕೆಲವು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಕಂಡುಬಂದಿವೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
#WATCH | Firefighting operation is underway at the firecracker factory in Harda, Madhya Pradesh where a massive explosion took place today.
Six people have died and 59 others are injured in the incident. pic.twitter.com/rbUFx6v6UH
— ANI (@ANI) February 6, 2024