



ಮಂಗಳೂರು(ಶಿವಮೊಗ್ಗ): ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್ಎಸ್ ಯುಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.






ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು ಇದರಿಂದ ಕೆರಳಿದ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಧರಣಿ ಕುಳಿತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.















