ಮಂಗಳೂರು(ಬೆಂಗಳೂರು): ಮಾಲಿನ್ಯ ನಿಯಂತ್ರಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆ ಹೊರಡಿಸಿತ್ತು. ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ವಾಹನಗಳ ನೋಂದಣಿ ಕಡ್ಡಾಯ ಮಾಡಿ ಶಾಕ್ ಕೊಟ್ಟಿತ್ತು. ನೋಂದಣಿ ನವೀಕರಿಸಿದ ವಾಹನಗಳಿಗೆ ಮಾತ್ರ ಅವಕಾಶ ಎಂದು ಆದೇಶಿಸಿತ್ತು. ಇದರ ಬೆನ್ನಲ್ಲೇ ಈಗ ಮತ್ತೊಂದು ಶಾಕ್ ನೀಡಿದೆ.
ಸರಕಾರ ಫೆ.17 ಡೆಡ್ಲೈನ್ ಕೊಟ್ಟರೂ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ನ್ನು ವಾಹನ ಸವಾರರು ಅಳವಡಿಸಿಕೊಂಡಿಲ್ಲ. ಹೀಗಾಗಿ ವಾಹನ ಮಾಲೀಕರ ವಿರುದ್ಧ ಕ್ರಮಕ್ಕೆ ಸಾರಿಗೆ ಇಲಾಖೆ ಪ್ಲಾನ್ ಮಾಡಿಕೊಂಡಿದೆ. ಕೇಂದ್ರದ ಆದೇಶದಂತೆ ರಾಜ್ಯದಲ್ಲಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸದ ವಾಹನ ಸವಾರರ ಮೇಲೆ ದಂಡಾಸ್ತ್ರ ಪ್ರಯೋಗ ಮಾಡಲು ಸಾರಿಗೆ ಇಲಾಖೆ ಮುಂದಾಗಿದೆ.