ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಜಪಾನ್ ಮಹಿಳೆ ನಾಪತ್ತೆ-ಹುಡುಕಿಕೊಡುವಂತೆ ಪತಿಯಿಂದ ಪೊಲೀಸರಿಗೆ ದೂರು

ಮಂಗಳೂರು(ಕಾರವಾರ): ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆಯಾಗಿದ್ದಾರೆ.

ಎಮಿ ಯಮಾಝಕಿ (40) ನಾಪತ್ತೆಯಾದ ಜಪಾನ್ ಮೂಲದ ಮಹಿಳೆ. ಫೆ.5 ರಂದು ಮಹಿಳೆ ತನ್ನ ಪತಿಯೊಂದಿಗೆ ಗೋಕರ್ಣದ ಬಂಗ್ಲೆಗುಡ್ಡದ ನೇಚರ್ ಕ್ಯಾಂಪಸ್‌ನಲ್ಲಿ ತಂಗಿದ್ದರು. ಮರುದಿನ ಮುಂಜಾನೆ 10:30ರ ಸುಮಾರಿಗೆ ನೇಚರ್ ಕ್ಯಾಂಪಸ್‌ನಿಂದ ಹೊರಹೋಗಿದ್ದ ಮಹಿಳೆ ನಾಪತ್ತೆಯಾಗಿದ್ದಾರೆ. ಈ ಕುರಿತು ಮಹಿಳೆಯ ಪತಿ ದೈ ಯಮಾಝಕಿ ಎಂಬುವವರು ಪತ್ನಿಯನ್ನು ಹುಡುಕಿಕೊಡುವಂತೆ ಗೋಕರ್ಣ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here