ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾದ ನಟಿ ಕಾಸಮ್ಮಲ್‌ ಸಾವು-ಮಗನಿಂದಲೇ ಬರ್ಬರವಾಗಿ ಹತ್ಯೆಯಾದ ತಾಯಿ

ಮಂಗಳೂರು(ಚೆನ್ನೈ): ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರ ‘ಕಡೈಸಿ ವಿವಸಾಯಿ’ ಸಿನಿಮಾದಲ್ಲಿ ನಟಿಸಿದ್ದ ಕಾಸಮ್ಮಲ್ (71) ತಮ್ಮ ಸ್ವಂತ ಮಗನಿಂದಲೇ ಹತ್ಯೆಯಾಗಿದ್ದಾರೆ.

ಮದ್ಯ ಖರೀದಿಸಲು ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಮಗ ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ಕಾಸಮ್ಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಪುತ್ರ ಪಿ.ನಾಮಕೋಡಿ(52)ಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಮಧುರೈ ಜಿಲ್ಲೆಯ ಉಸಿಲಂಪಟ್ಟಿ ಸಮೀಪದ ಅನೈಯೂರಿನಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here