ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ – ವೈದರ ನಡೆಗೆ ವ್ಯಾಪಕ ಆಕ್ರೋಶ

ಮಂಗಳೂರು(ಚಿತ್ರದುರ್ಗ): ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಡವಟ್ಟು ಮಾಡಿಕೊಂಡಿದ್ದಾರೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯನ್ನೇ ವೆಡ್ಡಿಂಗ್‌ ಶೂಟ್‌ ಲೋಕೇಶನ್‌ ಮಾಡಿಕೊಂಡಿರುವ ಅಭಿಷೇಕ್‌, ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದಾರೆ. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುತ್ತಾನೆ. ಈ ಎಲ್ಲಾ ದೃಶ್ಯಗಳನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ. ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

LEAVE A REPLY

Please enter your comment!
Please enter your name here