ಮಂಗಳೂರು: ಮಂಡ್ಯ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್, ಭಜರಂಗದಳ ವತಿಯಿಂದ ಪ್ರತಿಭಟನೆ ನಡೆಸಿ, ಸರಕಾರದ ವಿರುದ್ದ ಘೋಷಣೆ ಕೂಗಿದರು.
ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜದ ಮೇಲೆ ಗೌರವ ಇದೆ. ಹಾಗೆಯೇ ಹನುಮಧ್ವಜದ ಮೇಲೂ ಗೌರವ ಇದೆ. ಕಳೆದ 40 ವರ್ಷಗಳಿಂದ ಈ ಗ್ರಾಮದಲ್ಲಿ ಹನುಮಧ್ವಜವನ್ನು ಹಾಕುತ್ತಿದ್ದಾರೆ. ರಾಜ್ಯದಲ್ಲಿ ಹಿಂದೂ ವಿರೋಧಿ ಸಿದ್ದರಾಮಯ್ಯ ಸರಕಾರ ಇದ್ದ ಕಾರಣ ಹಿಂದೂ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಭಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರು ಆದರೆ ಅದು ಎಂದೂ ಸಾಧ್ಯವಿಲ್ಲ. ರಾಜ್ಯದಲ್ಲಿ ಹಿಂದೂ ಧ್ವಜ ಹಾಗೂ ರಾಷ್ಟ್ರ ಧ್ವಜ ವಿಚಾರದಲ್ಲಿ ಸರಕಾರ ರಾಜಕೀಯ ಮಾಡುತ್ತಿದೆ. ಕೆರೆಗೋಡು ಗ್ರಾಮದಲ್ಲಿ ಹನಮಧ್ವಜವನ್ನು ಹಾರಿಸಿಯೇ ಸಿದ್ದ ಎಂದು ಹಿಂದೂ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದಾರೆ.