ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಚಿತ್ರೀಕರಣ-ಡಾ. ಅಭಿಷೇಕ್ ಕರ್ತವ್ಯದಿಂದ ವಜಾ

ಮಂಗಳೂರು(ಚಿತ್ರದುರ್ಗ): ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿಕೊಂಡಿದ್ದ ಹೊರಗುತ್ತಿಗೆ ವೈದ್ಯ ಡಾ. ಅಭಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ. ಅಭಿಷೇಕ್ ಅವರು ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆ.7 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ‌ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಡಾ. ಅಭಿಷೇಕ್  ಅವರನ್ನು ತಕ್ಷಣ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here