ಮಂಗಳೂರು: ನಗರದ ಜೆರೋಸಾ ಶಾಲೆಯ ಶಿಕ್ಷಕಿಯೊಬ್ಬರು ಹಿಂದೂ ಧರ್ಮ, ಶ್ರೀರಾಮ, ಅಯೋಧ್ಯೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದ್ದು, ಹಿಂದೂ ಧರ್ಮಿಯರ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಯ ಬೆನ್ನಲ್ಲಿ ಶಿಕ್ಷಕಿಯ ಹೇಳಿಕೆ ಖಂಡಿಸಿ ಶಾಸಕ ವೇದವ್ಯಾಸ ಕಾಮತ್ ಜೊತೆಗೂಡಿ ಹಿಂದೂ ಕಾರ್ಯಕರ್ತರು ಶಾಲೆಯ ಬಳಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಒಂದು ಹಂತದಲ್ಲಿ ಮುತ್ತಿಗೆಗೂ ಯತ್ನಿಸಿದ್ದರು.
ಮಂಗಳೂರಿನ ಸಂತ ಜೆರೋಸ ಶಾಲೆಯ 7ನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬುವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಶಿಕ್ಷಕಿಯನ್ನು ಅಮಾನತುಗೊಳಿಸಿ ಶಾಲಾ ಆಡಳಿತ ಮಂಡಳಿ ಆದೇಶಿಸಿದೆ. ಶಿಕ್ಷಕಿ ಪ್ರಭಾ ಅವರನ್ನು ಅಮಾನತುಗೊಳಿಸಿ ಆದೇಶ ನೀಡುವ ಮೂಲಕ ಪ್ರಕರಣಕ್ಕೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ.