ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿ ಸಿಸ್ಟರ್ ಪ್ರಭಾ ಶ್ರೀರಾಮ ದೇವರನ್ನು ನಿಂದಿಸಿ ಹಿಂದೂ ಭಾವನೆಗಳಿಗೆ ದಕ್ಕೆ ತಂದಿದ್ದಾರೆನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಹಾಗೂ ಮನಪಾ ಸದಸ್ಯರಾದ ಭರತ್ ಮತ್ತು ಸಂದೀಪ್ ವಿರುದ್ಧ ದೂರು ದಾಖಲಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಮಂಗಳೂರು ಘಟಕ ಖಂಡಿಸುತ್ತದೆ ಎಂದು ವಿಹಿಂಪ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇಸು ದಾಖಲಿಸಿರುವುದನ್ನು ಖಂಡಿಸಿ ಫೆ.19ರಂದು ಮಂಗಳೂರು ನಗರ ವ್ಯಾಪ್ತಿಯ ಪೊಲೀಸ್ ಠಾಣೆಗಳ ಎದುರು ಜೈ ಶ್ರೀರಾಮ್ ಘೋಷಣೆಯೊಂದಿಗೆ ಹರತಾಳ ಆಚರಿಸುವುದಾಗಿ ಅವರು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ವಿಭಾಗ ಸಂಯೋಜಕ್ ಭುಜಂಗ ಕುಲಾಲ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಉಪಸ್ಥಿತರಿದ್ದರು.