ಜೆರೋಸಾ ಸ್ಕೂಲ್ ವಿವಾದ, ಶಾಸಕರ ವಿರುದ್ಧ ಕೇಸ್ – ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಗೆ ಕರೆ

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆ ವಿವಾದದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮನಪಾ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣಮಂಡಲ ವತಿಯಿಂದ ಫೆ.17 ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.

ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅವಹೇಳನವನ್ನು ವಿರೋಧಿಸಿದ ಕಾರಣಕ್ಕೆ ರಾಜ್ಯ ಸರಕಾರ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ದಾಖಲಿಸಿದೆ. ಇದನ್ನು ಖಂಡಿಸಿ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಫೆ.17 ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಧರ್ಮದ ಮೇಲಾಗುವ ಅನ್ಯಾಯವನ್ನು ಪ್ರತಿಭಟಿಸಲು ಎಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here