ಜೆರೋಸಾ ಶಾಲೆಯೆದುರು ಶಾಸಕ ವೇದವ್ಯಾಸ ಕಾಮತ್ ಗೂಂಡಾಗಿರಿ-ಸಮಾಜ ಒಡೆಯುವ ಕೆಲಸ – ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ನಿಂದನೆ ಪ್ರಕರಣದ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ‌ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿ, ಶಾಲೆಯೆದುರು ಶಾಸಕ ವೇದವ್ಯಾಸ ಕಾಮತ್ ಗೂಂಡಾಗಿರಿ ಮೆರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸರಕಾರವು ಜೆರೋಸಾ ಪ್ರಕರಣದ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿ ಹಾಗೂ ಕಲಬುರಗಿಯ ಶಿಕ್ಷಣ ಇಲಾಖೆಯ ಅಪರ ಆಯುಕ್ತರೂ ಆಗಿರುವ ಆಕಾಶ್ ಅವರನ್ನು ನೇಮಕ ಮಾಡಿದೆ ಎಂದು ತಿಳಿಸಿದ್ದಾರೆ.

ಸ್ವಾರ್ಥಕ್ಕಾಗಿ ಹಿಂದೂ ಧರ್ಮದ ಹೆಸರಲ್ಲಿ ಪ್ರಚೋದಿಸಲಾಗುತ್ತದೆ. ಭರತ್ ಶೆಟ್ಟಿ, ಶರಣ್ ಪಂಪ್ ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ಲವಾ?. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here