ಸಾಹಿತಿ, ಚಿಂತಕ ಕೆ.ಟಿ.ಗಟ್ಟಿ ನಿಧನ

ಮಂಗಳೂರು: ಕಾದಂಬರಿಗಳ ಮೂಲಕ ಪ್ರಸಿದ್ಧರಾಗಿದ್ದ, ಸಾಹಿತ್ಯ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಗಳ ಕುರಿತ ಲೇಖಕ, ನಿವೃತ್ತ ಪ್ರಾಧ್ಯಾಪಕ (ಕೂಡ್ಲು ತಿಮ್ಮಪ್ಪ ಗಟ್ಟಿ) ಕೆ.ಟಿ.ಗಟ್ಟಿ (86) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಫೆ.19ರಂದು ನಿಧನರಾದರು.

ಮೃತರು ಪತ್ನಿ, ನಿವೃತ್ತ ಶಿಕ್ಷಕಿ ಯಶೋದಾ, ನಿಟ್ಟೆ ವಿವಿಯಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿರುವ ಪುತ್ರ ಸತ್ಯಜಿತ್, ಅಮೆರಿಕದಲ್ಲಿ ಪರಿಸರ ವಿಜ್ಞಾನಿಯಾಗಿರುವ ಪುತ್ರಿ ಪ್ರಿಯದರ್ಶಿನಿ, ಆಸ್ಟ್ರಿಯಾದಲ್ಲಿ ಆಂಥ್ರಾಪಾಲಜಿಸ್ಟ್ ಆಗಿರುವ ಮತ್ತೋರ್ವ ಪುತ್ರಿ ಚಿತ್ ಪ್ರಭಾ ಸೇರಿದಂತೆ ಅಪಾರ ಬಂಧು ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ. ಕಾಸರಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿ, ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ ಸ್ನಾತಕೋತ್ತರ ಪದವಿ ಪಡೆದ ಗಟ್ಟಿ ಅವರು 1968ರಿಂದ ಮಣಿಪಾಲದ ಎಂಐಟಿ ಸಂಸ್ಥೆಯಲ್ಲಿ ಮತ್ತು ಉಡುಪಿಯ ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಇಥಿಯೋಪಿಯಾದಲ್ಲಿದ್ದ ಅವರು ಸ್ವದೇಶಕ್ಕೆ ಮರಳಿದ ನಂತರ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಬಳಿ ‘ವನಸಿರಿ’ಯಲ್ಲಿ ಕೃಷಿ ಮತ್ತು ಸಾಹಿತ್ಯಕೃಷಿಯಲ್ಲಿ ತೊಡಗಿಸಿಕೊಂಡಿದ್ದರು.

 

LEAVE A REPLY

Please enter your comment!
Please enter your name here