ಸಂತ ಜೆರೋಸಾ ಶಾಲೆ ಮುಂಭಾಗ ಪ್ರತಿಭಟನೆ ಪ್ರಕರಣ – ಶಾಸಕರು ಸೇರಿದಂತೆ ಎಲ್ಲಾ ಆರು ಮಂದಿಗೆ ನಿರೀಕ್ಷಣಾ ಜಾಮೀನು

ಮಂಗಳೂರು: ಸಂತ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಹಾಗೂ ಇತರರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನನ್ವಯ ಶಾಸಕರ ಸಹಿತ ಹಲವರ ವಿರುದ್ಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಆಗಿದ್ದು, ಶಾಸಕರು ಹಾಗೂ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್, ಕಾರ್ಪೊರೇಟರ್ ಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

LEAVE A REPLY

Please enter your comment!
Please enter your name here