ಜೆರೋಸಾ ಶಾಲೆ ವಿವಾದ : ವಿದ್ಯಾರ್ಥಿಗಳು ಹಾಗೂ ಪೋಷಕರ ವಿಚಾರಣೆ – ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ಹೇಳಿಕೆ ದಾಖಲು

ಮಂಗಳೂರು: ಜೆರೋಸಾ ಶಾಲೆಯ ವಿವಾದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಗುಲ್ಬರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಇಂದು ಏಳನೇ ತರಗತಿಯ ಎಲ್ಲಾ ಧರ್ಮದ ವಿದ್ಯಾರ್ಥಿಗಳು ಹಾಗೂ ಪೋಷಕರ ವಿಚಾರಣೆ ನಡೆಸಿದ್ದು, ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಮಾಹಿತಿಯನ್ನು ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ಸಂಗ್ರಹಿಸಿದ್ದು ಮುಂದಿನ ಎರಡು ಮೂರು ದಿನಗಳಲ್ಲಿ ತನಿಖೆಯ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗುವುದು.

LEAVE A REPLY

Please enter your comment!
Please enter your name here