ಆರೋಪಿಗಳು ಮಂಗಳೂರು ನಗರ ಕಮಿಷನರೇಟ್ ಮತ್ತು ದ.ಕನ್ನಡ ಜಿಲ್ಲೆಯಾದ್ಯಂತ ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಬ್ದುಲ್ ಫಯಾನ್ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ಕುಖ್ಯಾತ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈತನ ವಿರುದ್ಧ ಕೊಣಾಜೆ, ಉಳ್ಳಾಲ, ಬಂಟ್ವಾಳ ಟೌನ್ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿಯನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಬಂಧಿಸಲಾಗಿದೆ. ಮಂಗಳೂರು ನಗರ ಹಾಗೂ ಬಂಟ್ವಾಳ ತಾಲೂಕಿನ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟದ 10 ಪ್ರಕರಣಗಳಲ್ಲಿ ಭಾಗಿಯಾಗಿರುವ ಹಾಫಿಸ್ ಜಾಮೀನಿನ ಮೇಲೆ ಬಿಡುಗಡೆಯಾಗಿ ಪರಾರಿಯಾಗಿದ್ದ. ಇಬ್ಬರನ್ನೂ ಮುಂದಿನ ಕಾನೂನು ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ.