ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 2 ಹೆದ್ದಾರಿ ಕಾಮಗಾರಿಗಳಿಗೆ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಚಿವ ಗಡ್ಕರಿ ಅವರು ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ವರೆಗಿನ 614 ಕೋಟಿ ರೂ. ವೆಚ್ಚದ ಸುಮಾರು 28.50 ಕಿ.ಮೀ. ಉದ್ದದ ದ್ವಿಪಥ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಜೊತೆಗೆ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 344 ಕೋಟಿ ವೆಚ್ಚದ ಸುಮಾರು 11 ಕಿ.ಮೀ ದ್ವಿಪಥ ರಸ್ತೆ ಕಾಮಗಾರಿಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇಂದು ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆಯ ಎರಡೂ ಹೆದ್ದಾರಿ ಅಗಲಗೊಳಿಸುವಿಕೆ ಕಾಮಗಾರಿಗಳು ಸೇರಿದಂತೆ 13 ಕಾಮಗಾರಿಗಳಿಗೂ ಶಿಲಾನ್ಯಾಸ ಮಾಡಲಿದ್ದಾರೆ.