ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ನಿಧನರಾದರು.

ಭಾನುವಾರ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು(ಫೆ.25)ನಿಧನರಾಗಿದ್ದಾರೆ.ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಸಹ ಮಾಡಲಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು.

ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.ಉಗ್ರಾಣ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜಾ ವೆಂಕಟಪ್ಪ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here