ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಜಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಜೋಕಟ್ಟೆ ತೋಕೂರು ನಿವಾಸಿ ಇಮ್ರಾನ್ ಹಾಗೂ 2021ನೇ ಇಸವಿಯಲ್ಲಿ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ, ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಗೋರಕಪುರ ನಿವಾಸಿ ಧರ್ಮವೀರ ಎಂಬವರನ್ನು ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ ಜಿ.ಎಸ್ ರವರ ತಂಡ, ಈ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದೆ. ಇಮ್ರಾನ್ ಎಂಬಾತನ ವಿರುದ್ದ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿಸಿದ ಕೇಸುಗಳು ದಾಖಲಾಗಿರುತ್ತವೆ.

ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರ ಮಾರ್ಗದರ್ಶನದಲ್ಲಿ ಡಿಸಿಪಿ ಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ಮತ್ತು ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕರಾದ ಸಂದೀಪ್ ಜಿ.ಎಸ್ ರವರ ನೇತೃತ್ವದಲ್ಲಿ ಪಿಎಸ್‌ಐ ಗಳಾದ ಗುರು ಕಾಂತಿ, ರೇವಣಸಿದ್ದಪ್ಪ, ರವಿ ಎನ್‌ ಎನ್ ಮತ್ತು ಶೋಬಾ ಹಾಗೂ ಎಎಸ್‌ಐ ಗಳಾದ ರಾಮ ಪೂಜಾರಿ, ಜಗದೀಶ್ ಪುತ್ತೂರು, ರೋಹಿತ ಹಳೆಯಂಗಡಿ, ರಶೀದ್ ಶೇಖ , ಸುಜನ್ ಮತ್ತು ಬಸವರಾಜ್ ಪಾಟೀಲ್ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here