ಮಂಗಳೂರು(ಬೆಂಗಳೂರು): ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂಬ ಆರೋಪ ಸಾಬೀತಾದರೆ, ಆ ಘೋಷಣೆ ಕೂಗಿದ ವ್ಯಕ್ತಿಯನ್ನು ಗಂಭೀರ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಧ್ವನಿ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಬಗ್ಗೆ ಬಿಜೆಪಿ ಮಾತ್ರವಲ್ಲ, ಮಾಧ್ಯಮಗಳು ಸಹ ಆರೋಪಿಸಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಮತ್ತು ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಗೆಲುವಿನ ಸಂಭ್ರಮಾಚರಣೆ ವೇಳೆ, ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಸಮೀಪವಿದ್ದ ವ್ಯಕ್ತಿಯೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾನೆ ಎನ್ನಲಾಗುವ ವಿಡಿಯೊ ಕೆಲ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
#WATCH | On complaint filed by Karnataka BJP against Syed Naseer Hussain and his supporters for allegedly raising pro-Pakistan slogan at Vidhana Soudha, Karnataka CM Siddaramaiah says, "…We have sent the voice report to the FSL…if it is true that somebody has raised slogan… pic.twitter.com/i3fgtCx6is
— ANI (@ANI) February 28, 2024