ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ-ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

ಮಂಗಳೂರು(ಗುಜರಾತ್‌): ವಡೋದರಾ ಬಳಿ ಹೆದ್ದಾರಿಯೊಂದರಲ್ಲಿ ನಿಂತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅಂಬೆಗಾಲಿಡುವ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಮಾ.4ರಂದು ನಡೆದಿದೆ.

ಮಾ.3ರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ವಡೋದರಾ ಜಿಲ್ಲೆಯ ಕರ್ಜನ್ ತಾಲೂಕಿನಿಂದ ಒಂದೇ ಕುಟುಂಬದ ಇಬ್ಬರು ಪುರುಷರು, ಅವರ ಪತ್ನಿಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಈ ಪೈಕಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂರು ವರ್ಷದ ಮಗುವೊಂದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಭವಿಸಿದ ತಕ್ಷಣ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದು ಕಾರಿನೊಳಗೆ ಸಿಲುಕಿಕೊಂಡಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕಾರಿನೊಳಗಿದ್ದ ಐದು ಮಂದಿಯ ಪ್ರಾಣಪಕ್ಷಿ ಹಾರಿಹೋಗಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here