ಆ್ಯಸಿಡ್ ಸಂತ್ರಸ್ತೆಯರನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ

ಮಂಗಳೂರು(ಕಡಬ): ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಭೇಟಿಯಾಗಿ ವಿದ್ಯಾರ್ಥಿನಿಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಚಿಕಿತ್ಸಾ ಪರಿಹಾರ ನೀಡಲಾಗುವುದು, ವಿದ್ಯಾರ್ಥಿನಿಯರು ಮತ್ತೆ ಪರೀಕ್ಷೆ ಬರೆಯಬೇಕು ಎಂದು ಹೇಳಿದ್ದು, ಈ ಕುರಿತು ಶಿಕ್ಷಣ ಸಚಿವರ ಬಳಿ ಮಾತನಾಡುತ್ತೇವೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದ್ದು ಅವರಿಗೆ ವಾರದ ಬಳಿಕ ಪ್ಲಾಸ್ಟಿಕ್ ಸರ್ಜರಿ ಮಾಡೋದಾಗಿ ವೈದ್ಯರು ಹೇಳಿದ್ದಾರೆ. ಪ್ಲಾಸ್ಟಿಕ್ ಸರ್ಜರಿಗೆ ತಗಲುವ ವೆಚ್ಚ 20ಲಕ್ಷವನ್ನು ಪರಿಹಾರವಾಗಿ ನೀಡುತ್ತೇವೆ ಎಂದವರು ಹೇಳಿದ್ದಾರೆ.

ಆರೋಪಿ ಆ್ಯಸಿಡ್ ನ್ನು ಪ್ಲಾಸ್ಟಿಕ್ ಬಾಟಲ್ ನಲ್ಲಿ ತಂದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಆ್ಯಸಿಡ್ ತೀವ್ರ ಪ್ರಮಾಣದ್ದು ಆಗಿರುತ್ತಿದ್ದರೆ ದೊಡ್ಡ ಮಟ್ಟದ ಗಾಯವಾಗುತ್ತಿತ್ತು. ಎಲ್ಲಾ ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here