ಮಂಗಳೂರು: ಬಿಜೆಪಿಯ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ದ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟನ್ನು ನ್ಯಾಯಾಲಯ ಹಿಂಪಡೆದಿದೆ.
ಇಂದು ಶಾಸಕರು ಮತ್ತು ಸಂಸದರ ವಿಶೇಷ ಕೋರ್ಟ್ಗೆ ತೆರಳಿ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರಾದ ಜಯಪ್ರದಾ, ಅವರ ವಿರುದ್ಧ ಜಾರಿಗೊಳಿಸಿದ ವಾರಂಟ್ ಹಿಂಪಡೆಯುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ನ್ಯಾಯಾಲಯ 20,000 ರೂ.ಗಳ ದಂಡ ಮತ್ತು 4 ಜನರ ಶ್ಯೂರಿಟಿನೊಂದಿಗೆ ಅರ್ಜಿಯನ್ನು ಸ್ವೀಕರಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗೆ ತಪ್ಪದೆ ಹಾಜರಾಗುವಂತೆ ಸೂಚಿಸಿ ಅವರ ವಿರುದ್ದ ಜಾರಿ ಮಾಡಿದ್ದ ಜಾಮೀನು ರಹಿತ ವಾರಂಟ್ಗಳನ್ನು ಹಿಂಪಡೆದಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಇರುವುದರಿಂದ ನ್ಯಾಯಾಲಯ ಅವರ ವಿರುದ್ಧ 7 ಬಾರಿ ನಾನ್ ಬೇಲೇಬಲ್ ವಾರಂಟ್ ಜಾರಿ ಮಾಡಿತ್ತು. ಅಲ್ಲದೇ ಕಳೆದ ವಾರ ಜಯಪ್ರದಾ ತಲೆಮರೆಸಿಕೊಂಡಿದ್ದಾರೆ ಎಂದೂ ಘೋಷಿಸಿ ಮಾ.6 ರೊಳಗೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸುವಂತೆ ಆದೇಶ ಕೂಡಾ ಮಾಡಲಾಗಿತ್ತು.