ಪಾಕ್ ಪರ ಘೋಷಣೆ – ಎಫ್ಎಸ್ಎಲ್ ವರದಿಯಲ್ಲಿ ದೃಢ – ಮೂವರ ಬಂಧನ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮಂಗಳೂರು(ಬೆಂಗಳೂರು): ವಿಧಾನಸೌಧ ಆವರಣದಲ್ಲಿ ರಾಜ್ಯಸಭೆ ಸದಸ್ಯ ಡಾ.ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಇಂದು (ಮಾ.5) ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಎಫ್ಎಸ್ಎಲ್ ವರದಿ ಬರಲಿ ಎಂದು ಹೇಳುತ್ತಿದ್ದೆವು. ಎಫ್ಎಸ್ಎಲ್ ವರದಿ ಆಧರಿಸಿ ಕ್ರಮ ಕೈಗೊಡಿದ್ದೇವೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ದೃಢಪಟ್ಟಿದೆ. ಹೀಗಾಗಿ ಎಫ್ಎಸ್ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ. ವರದಿಯಲ್ಲಿ ಯಾರು ಘೋಷಣೆ ಕೂಗಿದ್ದಾರೆಂದು ಹೇಳಿಲ್ಲ. ಯಾಕೆ ಕೂಗಿದ್ದಾರೆಂದು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಕ್ಕೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ಪೊಲೀಸ್ ಅಧಿಕಾರಿಗಳ ಲೋಪ ಇದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ವಿರೋಧ ಪಕ್ಷದವರು ಸುಮ್ಮನೆ ಹೇಳುತ್ತಾರೆ. ಅವರು ಹೇಳ್ತಾರೆ ಎಂದು ಅರೆಸ್ಟ್ ಮಾಡೋಕೆ ಆಗುತ್ತಾ? ನಾವು ಎಫ್ಎಸ್ಎಲ್ ವರದಿ ಬರಲಿ ಅಂತಾ ಕಾಯುತ್ತಿದ್ದವು. ಈಗ ಬಂದಿದೆ. ಕ್ರಮ ಕೈಗೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here