ಮಂಗಳೂರು(ಬಳ್ಳಾರಿ): ತೆಲಂಗಾಣದ ವನಪರ್ತಿ ಜಿಲ್ಲೆಯ ಕೊತ್ತಕೋಟ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಮೂಲದ ಐವರು ದುರ್ಮರಣ ಹೊಂದಿರುವ ಘಟನೆ ಆಂಧ್ರದ ಮೆಹಬೂಬನಗರ ಜಿಲ್ಲೆಯ ಕೊತಕೋಟ ಬೈಪಾಸ್‌ನಲ್ಲಿ ಮಾ.4ರಂದು ನಡೆದಿದೆ.
ಮೃತರನ್ನು ಬಳ್ಳಾರಿ ಮೂಲದ ಬಸವನಕುಂಟೆಯ ನಿವಾಸಿಗಳಾದ ಫಾತೀಮಾ(50), ಅಬ್ದುಲ್ ರೆಹಮಾನ್(30), ಮಾರಿಯಾ(32), ವಾಸೀಂ(01), ಬುಶ್ರಾ(02) ಎಂದು ತಿಳಿದುಬಂದಿದೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕ, ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು ಜೊತೆಯಲ್ಲಿದ್ದ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ. ಎರ್ಟಿಗಾ ಕಾರಿನಲ್ಲಿ ಹೈದರಾಬಾದ್ಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.