ಮಂಗಳೂರು(ನವದೆಹಲಿ): ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು(ಮಾ.5) ವಜಾಗೊಳಿಸಿದೆ.
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಅದೇಶವನ್ನೂ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಈ ಪ್ರಕರಣದಲ್ಲಿ ಶಿವಕುಮಾರ್ ಸುಮಾರು ಮೂರು ತಿಂಗಳ ಕಾಲ ಜೈಲುಪಾಲಾಗಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಿಂದ ಈ ತೀರ್ಪು ಹೊರಬಿದ್ದಿದೆ.