ಮಂಗಳೂರು(ಬೆಂಗಳೂರು): ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಬಾಂಬ್ ಸ್ಪೋಟದ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿದೆ.
ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬಾಂಬರ್ ನ ಫೋಟೋ ರೇಖಾಚಿತ್ರ ಬಿಡುಗಡೆ ಮಾಡಿದ್ದು. ಈತನ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆಯಷ್ಟೇ ಬಾಂಬರ್ ಫೋಟೋ ಬಿಡುಗಡೆ ಮಾಡಿತ್ತು. ಇಂದು ಬಾಂಬರ್ ನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ.