ತುಮಕೂರು ಸಿದ್ಧಗಂಗಾ ಮಠದ ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲಾಕ್‌ಮೇಲ್‌ ಮಾಡಿ ಗ್ಯಾಂಗ್ ​ರೇಪ್

ಮಂಗಳೂರು(ತುಮಕೂರು): ಸಿದ್ದಗಂಗಾ ಮಠದ ಜಾತ್ರೆಗೆ ಬಂದಿಂದ ಬಾಲಕಿಯನ್ನು ಕರೆದೊಯ್ದು ತುಮಕೂರು ನಗರದ ಬಂಡೆಪಾಳ್ಯದ ಮನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಪ್ರಕರಣ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮೂವರನ್ನ ಬಂಧಿಸಲಾಗಿದೆ.

ಬಂಡೆಪಾಳ್ಯದಲ್ಲಿ ವಾಸವಿದ್ದ ಅಮೋಘ, ಹನುಮಂತ, ಪ್ರತಾಪ್ ಬಂಧಿತ ಆರೋಪಿಗಳು. ಮೊಬೈಲ್​ನಲ್ಲಿ ಬಾಲಕಿ ತನ್ನ ಬಾಯ್ ಫ್ರೇಂಡ್ ಜೊತೆ ಇದ್ದ ದೃಶ್ಯವನ್ನು ಆರೋಪಿಗಳು ರೆಕಾರ್ಡ್ ಮಾಡಿಕೊಂಡಿದ್ದಾರೆ. ಬಳಿಕ ವಿಡಿಯೋವನ್ನು ಬಾಲಕಿಗೆ ತೋರಿಸಿ, ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಬಲವಂತವಾಗಿ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here