ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಮತ್ತು ವರ್ಷಾವಧಿ ಜಾತ್ರೋತ್ಸವ ಹಿನ್ನೆಲೆಯಲ್ಲಿ ಇಂದು (ಮಾ.8) ಪೂರ್ವಾಹ್ನ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, ಮಹಾಪೂಜೆ ನೆರವೇರಿತು. ರಾತ್ರಿ 8 ಗಂಟೆಗೆ ರಥೋತ್ಸವ ನಡೆಯಲಿದೆ.
ರಾತ್ರಿ 10 ಗಂಟೆಗೆ ವಿಷ್ಣುಬಲಿ, ರಾತ್ರಿ 1ಗಂಟೆಗೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ, ರಥೋತ್ಸವ, ಕೆರೆದೀಪ, ಮಂಟಪ ಪೂಜೆ ನಡೆಯಲಿದೆ. ಮಾರ್ಚ್ 9ರಂದು ಮಧ್ಯಾಹ್ನ 12.15ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ಬಳಿಕ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀಕ್ಷೇತ್ರ ಕುದ್ರೋಳಿಯ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.