ಕಾಂಗ್ರೆಸ್ ಹಿರಿಯ ಮುಖಂಡ ಮೈಸೂರು ವಾಸು ಇನ್ನಿಲ್ಲ

ಮಂಗಳೂರು(ಮೈಸೂರು): ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ವಾಸು (72) ಮಾ.9ರಂದು ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ನಿಧನರಾದರು.

ಮೈಸೂರು ಮೇಯರ್ ಆಗಿದ್ದ ವಾಸು ಬಳಿಕ ಶಾಸಕರಾಗಿದ್ದರು. ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ಮತ್ತು ‘ಪ್ರಜಾನುಡಿ’ ಪತ್ರಿಕೆ ನಡೆಸುತ್ತಿದ್ದ ವಾಸು, 2014ರಲ್ಲಿ ಮೈಸೂರು ನಗರದ ಚಾಮರಾಜ ಕ್ಷೇತ್ರದ ಶಾಸಕರಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರ ವಾಸು ಅವರಿಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿತ್ತು.‌ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುವ ಮೂಲಕ ಸುದ್ದಿಯಾಗಿದ್ದರು. ಈ ಬಾರಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿಯವರಿಗೆ ಆಪ್ತರಾಗಿದ್ದ ವಾಸು ಅವರು ಮೊಯ್ಲಿ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here