ಕರ್ನಾಟಕದಲ್ಲಿ ಬಾಂಬೆ ಮಿಠಾಯಿ ಮತ್ತು ಗೋಬಿ ಮಂಚೂರಿ ಬ್ಯಾನ್-ಮಾ.11 ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ

ಮಂಗಳೂರು(ಬೆಂಗಳೂರು): ಪಾಂಡಿಚೆರಿ ಮತ್ತು ತಮಿಳುನಾಡು ಸರ್ಕಾರಗಳು ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ ) ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಬಾಂಬೆ ಮಿಠಾಯಿ ಮತ್ತು ಗೋಬಿಮಂಚೂರಿ ಬ್ಯಾನ್ ಮಾಡುವ ಕುರಿತು ಚಿಂತನೆ ನಡೆದಿದೆ. ಮಾ.11ರಂದು ನಡೆಯಲಿರುವ ಸಭೆಯಲ್ಲಿ ಸರಕಾರ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಬಾಂಬೆ ಮಿಠಾಯಿ ಮಕ್ಕಳ ಅಚ್ಚುಮೆಚ್ಚಿನ ತಿನಿಸಾಗಿದ್ದು, ಜಾತ್ರೆ ಸೇರಿದಂತೆ ಹಲವು ಕಡೆ ಇದನ್ನು ಮಾರಾಟ ಮಾಡಲಾಗುತ್ತದೆ. ಇನ್ನು, ರಸ್ತೆ ಬದಿ ಮಾಡಿ ಕೊಡುವ ಗೋಬಿ ಮಂಚೂರಿ ಮಕ್ಕಳಿಂದ ಹಿಡಿದು ವೃದ್ದರವರೆಗೆ ಭಾರಿ ಅಚ್ಚುಮೆಚ್ಚು ಆದರೆ ಗೋಬಿ ಮಂಚೂರಿಯಲ್ಲಿ ಸನ್‌ ಸೆಟ್‌ ಯಲ್ಲೋ ಹಾಗೂ ಟರ್ಟ್ರಝೈನ್ ಹಾನಿಕಾರಕ ಅಂಶ ಇರುವುದರಿಂದ ಎರಡೂ ರಾಸಾಯನಿಕ ಅಂಶಗಳನ್ನು ಬಳಕೆ ಮಾಡದೇ ಇರುವ ಬಗ್ಗೆ ಆರೋಗ್ಯ ಸಚಿವರು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ರೊಡಮೈನ್ ಬಿ ಸೇವನೆಯಿಂದ ಕ್ಯಾನ್ಸರ್ ಬರುವ ಸಾಧ್ಯತೆಗಳಿದ್ದು, ಕಣ್ಣು ದೃಷ್ಟಿ ಸಮಸ್ಯೆ ಹಾಗೂ ಲಿವರ್ ಸಂಬಂಧಿ ಸಮಸ್ಯೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಮಾ 11 ರಂದು ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ನಿಷೇಧ ಮಾಡುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here