ಮಂಗಳೂರು: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಗೃಹ ಸಚಿವಾಲಯವು ಇಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಧಿಸೂಚನೆ ಪ್ರಕಟಿಸುವ ಸಾಧ್ಯತೆಯಿದೆ.
ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಅಂಗೀಕರಿಸಲಾಗಿತ್ತು. ಅಂಗೀಕಾರದ ನಂತರ ಅದರ ನಿಬಂಧನೆಗಳ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಿದ್ದವು. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದಾಗಿ ಭಾರತಕ್ಕೆ ವಲಸೆ ಬಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡುವ ಸಲುವಾಗಿ ಅವರನ್ನು ಪತ್ತೆಹಚ್ಚಲು ಮಸೂದೆಯನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.