



ಮಂಗಳೂರು(ನವದೆಹಲಿ): ಭಯೋತ್ಪಾದಕರು ಮತ್ತು ಗ್ಯಾಂಗ್‌ಸ್ಟರ್ ಜೊತೆ ನಂಟು ಹೊಂದಿರುವ ಪ್ರಕರಣದ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ದಳ ಮಂಗಳವಾರ(ಮಾ.12) ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಶೋಧ ನಡೆಸಿದೆ ಎಂದು ಮೂಲಗಳು ತಿಳಿಸಿವೆ.







ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಢದ 30 ಕಡೆಗಳಲ್ಲಿ ಎನ್‌ಐಎ ವ್ಯಾಪಕ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೂ ಭಯೋತ್ಪಾದನೆ ಹಾಗೂ ಮಾಫಿಯಾ ಜಾಲಗಳನ್ನು ಹತ್ತಿಕ್ಕುವ ಭಾಗವಾಗಿ ಎನ್‌ಎಐ ವಿವಿಧೆಡೆ ದಾಳಿ ನಡೆಸಿತ್ತು. ಅಲ್ಲದೆ ಹಲವೆಡೆ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಎನ್‌ಐಎ ವಕ್ತಾರ ತಿಳಿಸಿದ್ದಾರೆ.














