ಮಂಗಳೂರು(ಚಂಡೀಗಢ): ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ಖಟ್ಟರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಖಟ್ಟರ್ ಜೊತೆ ಸಚಿವ ಸಂಪುಟದ ಎಲ್ಲ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಗೆ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಜೊತೆಗಿನ ಸೀಟು ಹಂಚಿಕೆಯಲ್ಲಿ ಒಮ್ಮತ ಮೂಡದ ಕಾರಣ ಮೈತ್ರಿ ಮುರಿದುಬಿದ್ದಿದೆ ಎಂಬ ವದಂತಿಗಳ ಬೆನ್ನಲ್ಲೇ ಖಟ್ಟರ್ ರಾಜೀನಾಮೆ ನೀಡಿದ್ದಾರೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ 40 ಶಾಸಕರ ಬಲ ಹೊಂದಿರುವ ಬಿಜೆಪಿ, ಪಕ್ಷೇತರ ಶಾಸಕರ ಬೆಂಬಲ ಪಡೆದು ಸರ್ಕಾರ ರಚಿಸುತ್ತಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಜೆಜೆಪಿಯ 10, 7 ಮಂದಿ ಪಕ್ಷೇತರ ಶಾಸಕರಿದ್ದಾರೆ. ಪ್ರತಿ ಪಕ್ಷ ಕಾಂಗ್ರೆಸ್‌ನ 30 ಶಾಸಕರಿದ್ದಾರೆ. ಸದ್ಯ, ಶಾಸಕರ ಸಭೆ ಕರೆದಿರುವ ಬಿಜೆಪಿ, ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.