ಶಿರಾಡಿಘಾಟಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ-ಗ್ಯಾಸ್ ಸೋರಿಕೆ, ವಾಹನ ಸಂಚಾರ ಬಂದ್-ಬದಲಿ ಮಾರ್ಗ ಬಳಸಲು ಸೂಚನೆ- ಎಮ್ ಆರ್ ಪಿ ಎಲ್ ತಜ್ಞರ ತಂಡ ಸ್ಥಳಕ್ಕೆ

ಮಂಗಳೂರು(ಸಕಲೇಶಪುರ): ಶಿರಾಡಿಘಾಟ್ ನ ಎನ್‌ಎಚ್‌-75 ರಲ್ಲಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾರ್ಗಮಧ್ಯೆ ನೂರಾರು ವಾಹನಗಳು ಚಲಿಸದೆ ನಿಂತಲ್ಲೆ ನಿಂತಿದ್ದು, ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ಧಾವಿಸಿದ್ದಾರೆ. ಮಂಗಳೂರಿನ ಎಮ್ ಆರ್ ಪಿ ಎಲ್ ನ ತಜ್ಞರ ತಂಡ ಘಟನಾ ಸ್ಥಳಕ್ಕೆ ತೆರಳಿದೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ.ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.

LEAVE A REPLY

Please enter your comment!
Please enter your name here