ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ-ಬಳ್ಳಾರಿಯಲ್ಲಿ ಎನ್ಐಎ ದಾಳಿ, ಓರ್ವ ವಶಕ್ಕೆ

ಮಂಗಳೂರು(ಬಳ್ಳಾರಿ): ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ವ್ಯಕ್ತಿಯೊಬ್ಬನನ್ನು ಮಾ.13ರಂದು ಬಂಧಿಸಿದೆ.

ಬಳ್ಳಾರಿಯಲ್ಲಿ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಯುವಕನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯುವಕನ ಮನೆ ಮೇಲೆ ದಾಳಿ ನಡೆಸಿದ ಎನ್ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗೆ ಎನ್ಐಎ ಅಧಿಕಾರಿಗಳು ಯುವಕನನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಮತ್ತು ಈ ಯುವಕನಿಗೂ ಏನಾದ್ರೂ ಲಿಂಕ್ ಇದೆಯೇ ಎಂಬುದು ವಿಚಾರಣೆಯಿಂದ ತಿಳಿದು ಬರಬೇಕಿದೆ.

ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಭಾರೀ ಸ್ಫೋಟ ಸಂಭವಿಸಿತ್ತು. 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಸುಧಾರಿತ ಕಡಿಮೆ ತೀವ್ರತೆಯ ಬಾಂಬ್ ಇದಾಗಿದ್ದರಿಂದ ದೊಡ್ಡ ಹಾನಿ ಸಂಭವಿಸಿರಲಿಲ್ಲ. ಬೆಂಗಳೂರು ಸಿಸಿಬಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ ಬ್ಯಾಗ್ ಸಮೇತ ಕೆಫೆಗೆ ಆಗಮಿಸಿ, ಬಳಿಕ ಒಬ್ಬನೇ ತೆರಳುತ್ತಿರುವುದು ಪತ್ತೆಯಾಗಿದೆ. ಈತನ ಚಹರೆಯನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

LEAVE A REPLY

Please enter your comment!
Please enter your name here