ಅನಂತ್ ಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆಗೆ ಖಂಡನೆ-ದ.ಕ ಜಿಲ್ಲಾ ಎನ್‌ಎಸ್‌ಯುಐ ಪ್ರತಿಭಟನೆ

ಮಂಗಳೂರು: ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿರುವ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಮಂಗಳೂರಿನ ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಮಾಜಿ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ, ಪ್ರಕಾಶ್‌ ಸಾಲಿಯಾನ್‌, ವಿನಯರಾಜ್‌ ಸೇರಿದಂತೆ ಹಲವು ಎನ್‌ಎಸ್‌ಯುಐ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here