ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿ ಪ್ರಕಟ-ದ.ಕ. ಲೋಕಸಭಾ ಕ್ಷೇತ್ರದಿಂದ ಕ್ಯಾ.ಬ್ರಿಜೇಶ್ ಚೌಟರಿಗೆ ಟಿಕೆಟ್

ಪುತ್ತೂರು/ಮಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಅಭ್ಯರ್ಥಿ ಪಟ್ಟಿ ಪ್ರಕಟಗೊಂಡಿದೆ. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅವಕಾಶ ಲಭಿಸಿದೆ. ಪಕ್ಕದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿಯು ಪ್ರಕಟಿಸಿದ ಎರಡನೇ ಪಟ್ಟಿಯಲ್ಲಿ ದೇಶದ ಒಟ್ಟು 72 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 26 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

LEAVE A REPLY

Please enter your comment!
Please enter your name here