ಬೆಂಗಳೂರು ಉತ್ತರದಲ್ಲೂ ಗೋಬ್ಯಾಕ್‌ ಅಭಿಯಾನ- ಶೋಭಾ ಕರಂದ್ಲಾಜೆಗೆ ಟಿಕೆಟ್‌ ನೀಡಿದ್ದಕ್ಕೆ ಸ್ಥಳೀಯ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಮಂಗಳೂರು/ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಬಿಜೆಪಿ ಘೋಷಿಸಿದ ಬೆನ್ನಲ್ಲೇ ಸ್ವಪಕ್ಷದ ಕಾರ್ಯಕರ್ತರಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು ʼಗೋ ಬ್ಯಾಕ್ ಶೋಭಕ್ಕʼ ಘೋಷಣೆಗಳನ್ನು ಕೂಗಿದರು.


ಸ್ಥಳೀಯರು ಭಿತ್ತಿಪತ್ರಗಳನ್ನು ಹಿಡಿದುಕೊಂಡು ‘ಗೋ ಬ್ಯಾಕ್ ಶೋಭಾ ಅಕ್ಕ’ ಎಂಬ ಘೋಷಣೆಗಳನ್ನು ಕೂಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ಶೋಭಾ ಅವರಿಗೆ ಬೆಂಗಳೂರು ಉತ್ತರಕ್ಕೆ ಟಿಕೆಟ್‌ ಕೊಡಬೇಡಿ. ಅವರು ಎಲ್ಲಿಂದಲೋ ಬಂದು ನಮ್ಮ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ. ಸ್ಥಳೀಯರಿಗೆ ನೀಡಿದರೆ ನಮ್ಮ ಸಮಸ್ಯೆಗಳು ಪರಿಹಾರವಾಗಬಹುದು ಎಂದು ಮಹಿಳೆಯೊಬ್ಬರು ಹೇಳುತ್ತಿರುವುದು ವೀಡಿಯೋದಲ್ಲಿದೆ.

ಸಾರ್ವಜನಿಕರು ʼಶೋಭಾ ಹಠಾವೋ- ಬೆಂಗಳೂರು ಉತ್ತರ ಬಿಜೆಪಿ ಬಚಾವೋʼ ಎಂಬ ಫಲಕಗಳನ್ನು ಹಿಡಿದು ಪ್ರತಿಭಟಿಸುತ್ತಿರುವುದು ವೀಡಿಯೋದಲ್ಲಿದೆ. ಸ್ಥಳೀಯ ಒಕ್ಕಲಿಗ ನಾಯಕರಿಗೆ ಟಿಕೆಟ್‌ ಕೊಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಕೆಲವು ದಿನಗಳ ಹಿಂದೆ ಉಡುಪಿ ಚಿಕ್ಕಮಗಳೂರಿನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರು ʼಗೋ ಬ್ಯಾಕ್ ಶೋಭʼ ಅಭಿಯಾನ ನಡೆಸಿದ್ದರು.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ:

LEAVE A REPLY

Please enter your comment!
Please enter your name here