ಮಂಗಳೂರು: ತುಳು, ಬ್ಯಾರಿ, ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ರಾಜ್ಯ ಸರಕಾರ ನೇಮಿಸಿದೆ.
ತುಳು ಅಕಾಡಮಿಯ ಸದಸ್ಯರಾಗಿ ಪೃಥ್ವಿರಾಜ್, ಕುಂಬ್ರ ದುರ್ಗಪ್ರಸಾದ್ ರೈ, ಮೋಹನ್ ದಾಸ್ ಕೊಟ್ಟಾರಿ, ಅಕ್ಷಯ್ ಆರ್. ಶೆಟ್ಟಿ, ಶೈಲೇಶ್ ಬಿನ್ ಭೋಜ ಸುವರ್ಣ, ಕಿಶೋರ್ ಬಿನ್ ಗುಡ್ಡಪ್ಪ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಯು. ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ, ಸಂತೋಷ್ ಶೆಟ್ಟಿ ನೇಮಕಗೊಂಡಿದ್ದಾರೆ.
ಬ್ಯಾರಿ ಅಕಾಡಮಿಯ ಸದಸ್ಯರಾಗಿ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಹಫ್ಸಾ ಬಾನು ಬೆಂಗಳೂರು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಹಮೀದ್ ಹಸನ್ ಮಾಡೂರು, ಸಮೀರ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.
ಕೊಂಕಣಿ ಅಕಾಡಮಿಯ ಸದಸ್ಯರಾಗಿ ವಂ.ಪ್ರಕಾಶ್ ಮಾಡ್ತಾ, ರೊನಾಲ್ಡ್ ಕ್ರಾಸ್ತಾ, ಡಾ. ವಿಜಯಲಕ್ಷ್ಮಿ ನಾಯಕ್, ನವೀನ್ ಲೋಬೋ, ಸಪ್ನಾಮೇ ಕ್ರಾಸ್ತಾ, ಸಮರ್ಥ್ ಭಟ್, ಸುನಿಲ್ ಸಿದ್ದಿ, ಜೇಮ್ಸ್ ಲೋಪಿಸ್, ದಯಾನಂದ ಮುಡೈೀಕರ್, ಪ್ರಮೋದ್ ಪಿಂಟೋ ನೇಮಕಗೊಂಡಿದ್ದಾರೆ.