ಕಾರು-ಟ್ರ್ಯಾಕ್ಟರ್​ ಮಧ್ಯೆ ಭೀಕರ ಅಪಘಾತ – ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಸಾವು

ಮಂಗಳೂರು(ಬಿಹಾರ): ಬಿಹಾರದ ಖಗಾರಿಯಾ ಎಂಬಲ್ಲಿನ ಪಸ್ರಾಹ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆ ಮೆರವಣಿಗೆ ಮುಗಿಸಿ ಹಿಂತಿರುಗುತ್ತಿದ್ದ ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ತುಟ್ಟಿ ಮೋಹನಪುರದಿಂದ ಮಾದಯ್ಯ ಬಿತ್ತಲ ಗ್ರಾಮಕ್ಕೆ ಕಾರು ಹಿಂದಿರುಗುತ್ತಿತ್ತು. ಎನ್‌ಎಚ್ 31ರ ವಿದ್ಯಾರತನ್ ಪೆಟ್ರೋಲ್ ಪಂಪ್​ ಸಮೀಪ ಟ್ರಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು ರಸ್ತೆ ಬದಿಗೆ ಉರುಳಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತರಲ್ಲಿ ಮೂವರು ಮಕ್ಕಳಿದ್ದಾರೆ ಎಂದು ಗೋಗ್ರಿಯ ಡಿಎಸ್​ಪಿಯ ರಮೇಶ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here