ಬೆಂಗಳೂರು ಸೇರಿ ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಮಂಗಳೂರು: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ನಗರದಲ್ಲಿ 34.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಮುಂದುವರೆಯಲಿದೆ. ಕೊಪ್ಪಳದಲ್ಲಿ 39.5 ಡಿಗ್ರಿ ಸಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.9 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

LEAVE A REPLY

Please enter your comment!
Please enter your name here