ಮಂಗಳೂರು(ನವದೆಹಲಿ): ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
ಬಾಂಡ್‌ಗಳಿಗೆ ಸಂಬಂಧಿಸಿದ ವಿವರವನ್ನು ಬಿಡುಗಡೆಗೊಳಿಸಬೇಕೆಂಬ ಅಗತ್ಯತೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಹೇಳಿದೆ. ಯೂನಿಕ್ ಬಾಂಡ್ ನಂಬರ್‌ಗಳನ್ನೂ ಒಳಗೊಂಡಂತೆ ಎಲ್ಲಾ ವಿವರಗಳನ್ನು ಎಸ್‌ಬಿಐ ಅಧ್ಯಕ್ಷ ಮಾರ್ಚ್ 21 ಸಂಜೆ 5ರೊಳಗೆ ಅಫಿಡಿವಿಟ್ ಮೂಲಕ ಕೋರ್ಟ್‌ಗೆ ಸಲ್ಲಿಸಬೇಕು ಎಂದು ತಿಳಿಸಿದೆ. ಯೂನಿಕ್ ಬಾಂಡ್ ನಂಬರ್ ವಿವರಗಳು ಬಾಂಡ್ ಖರೀದಿಸಿದವರು ಪಡೆದವರು ಯಾರು ಎಂಬ ವಿವರಗಳನ್ನು ಸ್ಪಷ್ಟವಾಗಿ ಒಳಗೊಂಡಿರುತ್ತವೆ.