ಅಪಘಾತಕ್ಕೊಳಗಾದ ಕಣ್ಣು ಹೊಡಿಯಾಕ ಸಾಂಗ್ ಗಾಯಕಿ ಮಂಗ್ಲಿ ಕಾರು-ಸಣ್ಣಪುಟ್ಟ ಗಾಯದೊಂದಿಗೆ ಮಂಗ್ಲಿ ಅಪಾಯದಿಂದ ಪಾರು  

ಮಂಗಳೂರು(ಬೆಂಗಳೂರು): ಕನ್ನಡದಲ್ಲಿ ಸಾಕಷ್ಟು ಹಿಟ್ ಗೀತೆಗಳಿಗೆ ಧ್ವನಿಯಾಗಿರುವ, ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತವಾಗಿದೆ.

ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ಹೈದರಾಬಾದ್​ಗೆ ಬರುತ್ತಿದ್ದ ವೇಳೆ ಶಂಶಾಬಾದ್ ತೊಂಡುಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿದೆ.

ಮಾ.17ರ ತಡರಾತ್ರಿ ಈ ಘಟನೆ ನಡೆದಿದೆ. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಇದ್ದ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ದಿವ್ಯಾ ಪ್ರಿಯಾ ಎಂಬುವವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here