ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್-ಚಾಲಕ ಸಾವು, 20 ಮಂದಿಗೆ ಗಾಯ

ಮಂಗಳೂರು(ಕಾಸರಗೋಡು): ಕಾಸರಗೋಡು ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ಮಾ.18ರ ಸಂಜೆ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದ್ದು, ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕಾಸರಕೋಟ್ ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಮೃತ ದುರ್ದೈವಿ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಈ ಭಾಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಸ್ಸಿನಲ್ಲಿದ್ದ ಎಲ್ಲರನ್ನೂ ಇಲ್ಲಿಂದ ಹೊರತೆಗೆದ ಬಳಿಕ ಅಗ್ನಿಶಾಮಕ ದಳದವರು ಕ್ರೇನ್ ಮೂಲಕ ಬಸ್ ಅನ್ನು ರಸ್ತೆ ಬದಿಗೆ ಸ್ಥಳಾಂತರಿಸಿದರು.

LEAVE A REPLY

Please enter your comment!
Please enter your name here