ಸೌದಿ ಅರೇಬಿಯಾದ ತಾಯಿಫ್ ಬಳಿ ಕಾರು ಅಪಘಾತ-ಹಳೆಯಂಗಡಿ ಮೂಲದ ನಾಲ್ವರ ದುರ್ಮರಣ

ಮಂಗಳೂರು(ಸೌದಿ ಅರೇಬಿಯಾ): ಸೌದಿ ಅರೇಬಿಯಾದ ತಾಯಿಫ್ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಳೆಯಂಗಡಿ ಮೂಲದ ನಾಲ್ವರು ಮೃತಪಟ್ಟಿದ್ದಾರೆ.

ಕತಾರ್ ನಿಂದ ಸೌದಿ ಅರೇಬಿಯಾಕ್ಕೆ ಉಮ್ರಾ ನಿರ್ವಹಿಸಲು ಕಾರಿನಲ್ಲಿ ತೆರಳುತ್ತಿದ್ದ ಹಳೆಯಂಗಡಿ ಮೂಲದ ದಂಪತಿ, 40 ದಿನದ ಹಸುಗೂಸು ಸೇರಿದಂತೆ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನೊಂದು ಮಗು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯಂಗಡಿ ತೋಕೂರು ಸರಕಾರಿ ಶಾಲೆಯ ಪಕ್ಕದಲ್ಲಿರುವ ಕುಟುಂಬದ ಮೂಲ ಮನೆಯಿದ್ದು, ನೀರವ ಮೌನ ನೆಲೆಸಿದೆ.

LEAVE A REPLY

Please enter your comment!
Please enter your name here