ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಕೆ. ಎಂ. ಮುಸ್ತಫ ನೇಮಕ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೈನಾರಿಟಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಕೆ. ಎಂ. ಮುಸ್ತಫ ನೇಮಕಗೊಂಡಿದ್ದಾರೆ. ಮೀಫ್ ಉಪಾಧ್ಯಕ್ಷ, ಮಾಜಿ ನಗರ ಪಂಚಾಯತ್ ಸದಸ್ಯರಾಗಿದ್ದ ಕೆ. ಎಂ. ಮುಸ್ತಫ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಇಮ್ರಾನ್ ಪ್ರತಾಪ್ ಘರಿ ಅವರ ಅನುಮೋದನೆಯೊಂದಿಗೆ ಎಐಸಿಸಿ ಮೈನಾರಿಟಿ ವಿಭಾಗ ಸಂಯೋಜಕರು, ಕರ್ನಾಟಕ ಉಸ್ತುವಾರಿ ಪದಾಧಿಕಾರಿ ಜೀನಾ. ಎಸ್. ಗಾಲ ಅವರು ನೇಮಿಸಿರುತ್ತಾರೆ. ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಶಿಫಾರಸ್ಸಿ ನಂತೆ ಈ ನೇಮಕಾತಿ ಮಾಡಲಾಗಿದೆ.

ಈ ನೇಮಕಾತಿಗೆ ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾo ರವರಿಗೆ ಕೆ. ಎಂ. ಮುಸ್ತಫ ಕೃತಜ್ಞತೆ ಸಲ್ಲಿಸಿರುತ್ತಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಮುಸ್ತಫ ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ಸುಧೀರ್ಘ 25 ವರ್ಷ ಸೇವೆ ಸಲ್ಲಿಸಿದ್ದು, ಜಿಲ್ಲಾ ಯೋಜನಾ ಸಮಿತಿ, ವಕ್ಫ್ ಸಮಿತಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿರುತ್ತಾರೆ. ಕಳೆದ ಒಂದು ವರ್ಷದ ಹಿಂದೆ ಇದೇ ಹುದ್ದೆಗೆ ನೇಮಕಗೊಂಡಿದ್ದು, ವಿಧಾನಸಭೆ ಚುನಾವಣೆ ನಂತರ ಎಲ್ಲಾ ಸಮಿತಿಗಳನ್ನು ಬರ್ಖಾಸ್ತು ಮಾಡಲಾಗಿತ್ತು, ಈಗ ಪುನಃ ನೂತನ ರಾಜ್ಯ ಸಮಿತಿ ಅಸ್ತಿತ್ವಕ್ಕೆ ಬಂದಿರುತ್ತದೆ.

LEAVE A REPLY

Please enter your comment!
Please enter your name here